ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.
ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.
ನನ್ನ ಪವಿತ್ರಸ್ಥಳದಲ್ಲಿ ಸೇವೆಮಾಡಲು ಲೇವಿಯರು ಆರಿಸಲ್ಪಟ್ಟಿರುತ್ತಾರೆ. ಅವರು ಆಲಯದ ಪ್ರವೇಶ ದ್ವಾರವನ್ನು ಕಾವಲು ಕಾಯ್ದರು. ಆಲಯದೊಳಗೆ ಸೇವೆಮಾಡಿದರು. ಜನರು ಅರ್ಪಿಸುವ ಪ್ರಾಣಿಗಳನ್ನು ವಧಿಸಿ ಯಜ್ಞಕ್ಕಾಗಿ ಅವುಗಳನ್ನು ತಯಾರುಮಾಡಿ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದರು. ಜನರಿಗೆ ಸಹಾಯ ಮಾಡಿ, ಅವರ ಸೇವೆಮಾಡಲು ಅವರು ಆರಿಸಲ್ಪಟ್ಟಿದ್ದಾರೆ.