ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”
ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆಗಳನ್ನು ಮಾಡಬೇಕು. ಅವು ಯಾವುವೆಂದರೆ: ಒಂದು ಹೋರಿಯೊಡನೆ ಮೂರು ಸೇರು ದ್ರಾಕ್ಷಾರಸವನ್ನೂ ಟಗರಿನೊಡನೆ ಎರಡು ಸೇರು ದ್ರಾಕ್ಷಾರಸವನ್ನೂ ಕುರಿಮರಿಯೊಡನೆ ಒಂದೂವರೆ ಸೇರು ದ್ರಾಕ್ಷಾರಸವನ್ನೂ ಅರ್ಪಿಸಬೇಕು. ವರ್ಷದ ಪ್ರತಿತಿಂಗಳು ಅಮಾವಾಸ್ಯೆಯಲ್ಲಿ ಅರ್ಪಿಸತಕ್ಕ ಮಾಸಿಕ ಸರ್ವಾಂಗಹೋಮಗಳು ಇವುಗಳೇ.