Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:12 - ಪರಿಶುದ್ದ ಬೈಬಲ್‌

12 ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:12
11 ತಿಳಿವುಗಳ ಹೋಲಿಕೆ  

ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ನಾನು ನದಿಯ ತೀರದಲ್ಲಿ ನಡೆಯುತ್ತಿರುವಾಗ ಅದರ ಎರಡೂ ಕಡೆಗಳಲ್ಲಿ ಲೆಕ್ಕವಿಲ್ಲದಷ್ಟು ಮರಗಳನ್ನು ನೋಡಿದೆನು.


ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.


ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು.


ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ನಿಮ್ಮ ಅಂಗಾಲಿನಿಂದ ಹಿಡಿದು ನಡುನೆತ್ತಿಯವರೆಗೂ ನಿಮ್ಮ ದೇಹದಲ್ಲೆಲ್ಲಾ ಗಾಯಗಳೂ ಬಾಸುಂಡೆಗಳೂ ಹುಣ್ಣುಗಳೂ ತುಂಬಿಕೊಂಡಿವೆ. ಆದರೆ ಆ ಹುಣ್ಣುಗಳಿಗೆ ನೀವು ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ; ಅವುಗಳನ್ನು ಒರೆಸಲಿಲ್ಲ, ಕಟ್ಟಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು