Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:13 - ಪರಿಶುದ್ದ ಬೈಬಲ್‌

13 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರ ಹನ್ನೆರಡು ಕುಲಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡುಪಾಲು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:13
12 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”


ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.


ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”


ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯೋಸೇಫನ ಮಕ್ಕಳಾದ ಮನಸ್ಸೆ ಕುಲದವರು ಮತ್ತು ಎಫ್ರಾಯೀಮ್ ಕುಲದವರು ತಮ್ಮ ಪಾಲಿನ ಸ್ವಾಸ್ತ್ಯವನ್ನು ಪಡೆದರು.


ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.


“ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್‌ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು