“ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್‌ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು.
ಅಲ್ಲಿಂದ ಬೇರೋತ್ ಕಡೆಗೂ ಅಲ್ಲಿಂದ ಸಿಬ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.