ಯೆಹೆಜ್ಕೇಲನು 47:19 - ಪರಿಶುದ್ದ ಬೈಬಲ್19 “ದಕ್ಷಿಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್-ಕಾದೇಶ್ ನಲ್ಲಿರುವ ನೀರಿನ ಬುಗ್ಗೆಯವರೆಗೂ ಹೋಗುವರು. ಬಳಿಕ ಅಲ್ಲಿಂದ ಹೊರಟು ಈಜಿಪ್ಟಿನ ನೀರಿನ ತೊರೆಯ ಮಾರ್ಗದಿಂದ ಭೂಮಧ್ಯ ಸಮುದ್ರವನ್ನು ಸೇರುವದು. ಇದು ದಕ್ಷಿಣದ ಮೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತೆಂಕಣ ಮೇರೆಯು ತಾಮಾರಿನಿಂದ ಹೊರಟು ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ [ಐಗುಪ್ತದ ಮುಂದಿರುವ] ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ತೆಂಕಣ ಮೇರೆಯು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!