Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:22 - ಪರಿಶುದ್ದ ಬೈಬಲ್‌

22 ನೀವು ಇದನ್ನು ಸ್ವಂತ ಸ್ವಾಸ್ತ್ಯಕ್ಕಾಗಿ ವಿಂಗಡಿಸಬೇಕು. ನಿಮ್ಮ ಮಧ್ಯೆ ಪರದೇಶದವರೂ ಅವರ ಮಕ್ಕಳೂ ವಾಸವಾಗಿದ್ದಾರೆ. ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಬೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:22
20 ತಿಳಿವುಗಳ ಹೋಲಿಕೆ  

ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.


ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.


ಆದ್ದರಿಂದ ನೀವೂ ಪರದೇಶಿಯರನ್ನು ಪ್ರೀತಿಸಬೇಕು. ನೀವೂ ಸಹ ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದಿರಿ.


“ಈ ದೇಶವನ್ನು ನಿಮ್ಮ ಕುಲಗಳಿಗನುಸಾರವಾಗಿ ನೀವು ವಿಂಗಡಿಸಬೇಕು.


ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನ್ನು ವಿಂಗಡಿಸಬೇಕು. ಆ ಸಮಯದಲ್ಲಿ ಒಂದು ಭಾಗವನ್ನು ಪ್ರತ್ಯೇಕಿಸಿಡಬೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.


ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು