ಯೆಹೆಜ್ಕೇಲನು 47:4 - ಪರಿಶುದ್ದ ಬೈಬಲ್4 ಅವನು ತಿರುಗಿ ಸಾವಿರ ಮೊಳ ಅಳೆದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನ್ನ ಸೊಂಟದಷ್ಟು ಆಳವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ತಿರುಗಿ ಸಾವಿರ ಮೊಳ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ, ಆ ನೀರು ಸೊಂಟದವರೆಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಪುನಃ ಸಾವಿರ ಮೊಳ ಅಳೆದು ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ನೀರು ಸೊಂಟದವರೆಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಸಾವಿರಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು. ಅಧ್ಯಾಯವನ್ನು ನೋಡಿ |