ಯೆಹೆಜ್ಕೇಲನು 47:7 - ಪರಿಶುದ್ದ ಬೈಬಲ್7 ನಾನು ನದಿಯ ತೀರದಲ್ಲಿ ನಡೆಯುತ್ತಿರುವಾಗ ಅದರ ಎರಡೂ ಕಡೆಗಳಲ್ಲಿ ಲೆಕ್ಕವಿಲ್ಲದಷ್ಟು ಮರಗಳನ್ನು ನೋಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಹಿಂದಿರುಗಲು ಆಹಾ, ನದಿಯ ಎರಡು ದಡಗಳಲ್ಲಿಯೂ ಅನೇಕ ವೃಕ್ಷಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಹಿಂದಿರುಗಲು ಆಹಾ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ತಿರುಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆ ಕಡೆಯೂ ಈ ಕಡೆಯೂ ಅತಿ ಹೆಚ್ಚು ಮರಗಳಿದ್ದವು. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”