Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:8 - ಪರಿಶುದ್ದ ಬೈಬಲ್‌

8 ಅವನು ನನ್ನೊಡನೆ, “ಈ ನದಿಯು ಪೂರ್ವಕ್ಕೆ ಹೊರಟು ಅರಾಬಾ ತಗ್ಗಿನ ಕಡೆ ಹರಿಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ನನಗೆ ಹೀಗೆ ಹೇಳಿದನು, “ಈ ಪ್ರವಾಹವು ಪೂರ್ವ ಪ್ರಾಂತ್ಯಕ್ಕೆ ಹೊರಟು, ಅರಾಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು. ಈ ನೀರು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವನು ನನಗೆ ಹೀಗೆ ಹೇಳಿದನು - ಈ ಪ್ರವಾಹವು ಪೂರ್ವಪ್ರಾಂತ್ಯಕ್ಕೆ ಹೊರಟು ಅರಾಬಾ ಎಂಬ ತಗ್ಗಿಗೆ ಇಳಿದು ಲವಣಸಮುದ್ರದ ಕಡೆಗೆ ಹರಿಯುವದು; [ದೇವಸ್ಥಾನದಿಂದ] ಹೊರಟ ಪ್ರವಾಹವು ಲವಣ ಸಮುದ್ರಕ್ಕೆ [ಸೇರಲು] ಅದರ ನೀರು ಸಿಹಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:8
17 ತಿಳಿವುಗಳ ಹೋಲಿಕೆ  

ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಅವರ ಪಶ್ಚಿಮದ ಮೇರೆ ಜೋರ್ಡನ್ ಹೊಳೆಯಾಗಿದೆ; ಉತ್ತರದ ಮೇರೆ ಗಲಿಲಾಯ ಸಮುದ್ರವಾಗಿದೆ; ದಕ್ಷಿಣದ ಮೇರೆ ಮೃತ್ಯು ಸಮುದ್ರವಾಗಿದೆ. ಅದು ಪಿಸ್ಗಾ ಬೆಟ್ಟದ ಬುಡದಲ್ಲಿದೆ.


ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ್ಯು ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.


ಮರಭೂಮಿಯೂ ಒಣನೆಲವೂ ಬಹಳವಾಗಿ ಸಂತೋಷಿಸುವದು. ಅದು ಹರ್ಷಿಸುತ್ತಾ ಪುಷ್ಪದಂತೆ ಫಲಿಸುವುದು.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.


ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.


ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು