ಯೆಹೆಜ್ಕೇಲನು 48:13 - ಪರಿಶುದ್ದ ಬೈಬಲ್13 “ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ, ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು; [ಈ ಎರಡು ಪಾಲುಗಳ] ಒಟ್ಟಳತೆ ಎಷ್ಟಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ. ಅಧ್ಯಾಯವನ್ನು ನೋಡಿ |
ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ.