Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:18 - ಪರಿಶುದ್ದ ಬೈಬಲ್‌

18 ವಿಶೇಷವಾದ ಪ್ರದೇಶದಲ್ಲಿ ಉಳಿದ ಸ್ಥಳದ ಪೂರ್ವಕ್ಕೆ ಹತ್ತು ಸಾವಿರ ಮೊಳ ಮತ್ತು ಪಶ್ಚಿಮಕ್ಕೆ ಹತ್ತು ಸಾವಿರ ಮೊಳ. ಈ ಸ್ಥಳವು ಭೂಪ್ರದೇಶದ ಪವಿತ್ರ ಭಾಗದ ಪಕ್ಕದಲ್ಲಿರುತ್ತದೆ. ನಗರದ ಕೆಲಸಗಾರರಿಗೆ ಬೆಳೆಗಳನ್ನು ಬೆಳೆಯಿಸುವುದಕ್ಕಾಗಿ ಈ ಸ್ಥಳವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ಮಿಕ್ಕ ಭೂಮಿಯ ಉದ್ದ ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆ ಐದು ಕಿಲೋಮೀಟರ್, ಪಶ್ಚಿಮದ ಕಡೆ ಐದು ಕಿಲೋಮೀಟರ್. ಆ ಭೂಮಿ ಮೀಸಲಾದ ಪವಿತ್ರ ಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವುದು; ಅದರ ಉತ್ಪತ್ತಿಯು ಅದನ್ನು ಕೃಷಿಮಾಡುವ ಆ ಪುರನಿವಾಸಿಗಳಿಗೆ ಆಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ವಿುಕ್ಕ ಭೂವಿುಯ ಉದ್ದವು ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಮೂಡಲ ಕಡೆ ಹತ್ತು ಸಾವಿರ ಮೊಳ, ಪಡುವಲ ಕಡೆ ಹತ್ತು ಸಾವಿರ ಮೊಳ; ಆ ಭೂವಿುಯು ಮೀಸಲಾದ ಪವಿತ್ರಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವದು; ಅದರ ಉತ್ಪತ್ತಿಯು ಅದನ್ನು ಗೆಯ್ಯುವ ಆ ಪುರನಿವಾಸಿಗಳಿಗೆ ಆಹಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:18
6 ತಿಳಿವುಗಳ ಹೋಲಿಕೆ  

“ಪವಿತ್ರ ಪ್ರದೇಶ ಭಾಗದ ಪಕ್ಕದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಐದು ಸಾವಿರ ಮೊಳ ಅಗಲದ ಪ್ರದೇಶ ಭಾಗವು ಸಹ ಇರುತ್ತದೆ. ಇಸ್ರೇಲಿನ ಉಳಿದೆಲ್ಲ ಜನರಿಗೂ ಈ ಪ್ರದೇಶ ಭಾಗವು ಪಟ್ಟಣವಾಗಿರುತ್ತದೆ.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ಪಶುಗಳನ್ನು ಮೇಯಿಸಲು ಪಟ್ಟಣದ ಸುತ್ತಲೂ ಹುಲ್ಲುಗಾವಲಿರುವದು. ಈ ಹುಲ್ಲುಗಾವಲಿನ ಅಗಲವು ಪಟ್ಟಣದ ಸುತ್ತಲೂ ಇನ್ನೂರ ಐವತ್ತು ಮೊಳವಿರುತ್ತದೆ.


ನಗರದ ಕೆಲಸಗಾರರು ಈ ಜಾಗವನ್ನು ಉತ್ತು ಬೆಳೆ ಬೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು