ಯೆಹೆಜ್ಕೇಲನು 48:20 - ಪರಿಶುದ್ದ ಬೈಬಲ್20 “ವಿಶೇಷವಾದ ಈ ಭೂಪ್ರದೇಶವು ಚೌಕವಾಗಿರುವದು. ಇದರ ಉದ್ದ ಮತ್ತು ಇಪ್ಪತ್ತೈದು ಸಾವಿರ ಮೊಳ ಅಗಲ ಇಪ್ಪತ್ತೈದು ಸಾವಿರ ಮೊಳ. ಈ ಪ್ರದೇಶವನ್ನು ನೀನು ಅದರ ವಿಶೇಷವಾದ ಕಾರ್ಯಗಳಿಗಾಗಿ ಮೀಸಲಾಗಿಡಬೇಕು. ಅದರ ಒಂದು ಭಾಗವು ಯಾಜಕರಿಗಾಗಿರುತ್ತದೆ. ಇನ್ನೊಂದು ಭಾಗವು ಲೇವಿಯರಿಗಾಗಿರುತ್ತದೆ; ಮತ್ತೊಂದು ಭಾಗವು ಪಟ್ಟಣಕ್ಕಾಗಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೀಸಲಾದ ಪೂರ್ಣಕ್ಷೇತ್ರದ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹನ್ನೆರಡುವರೆ ಕಿಲೋಮೀಟರ್; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರ ರಾಜಧಾನಿಗೆ ಒಳಪಟ್ಟ ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮೀಸಲಾದ ಪೂರ್ಣಕ್ಷೇತ್ರದ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತೈದು ಸಾವಿರ ಮೊಳ; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರವು ರಾಜಧಾನಿಗೆ ಒಳಪಟ್ಟ ಭೂವಿುಸಹಿತವಾಗಿ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎಲ್ಲಾ ಕಾಣಿಕೆಯ ಸ್ಥಳವು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು. ನೀವು ಪರಿಶುದ್ಧ ವಿಶೇಷ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸೊತ್ತಿನ ಸಂಗಡ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
“ಈ ವಿಶೇಷ ಭೂಪ್ರದೇಶದ ಒಂದು ಭಾಗವು ದೇಶಾಧಿಪತಿಗೆ ಸೇರಿದೆ. ಈ ಭೂಪ್ರದೇಶವು ಚೌಕವಾಗಿದೆ. ಇದರ ಉದ್ದ 25,000 ಮೊಳ. ಇದರ ಅಗಲ 25,000 ಮೊಳ. ಈ ವಿಶೇಷ ಪ್ರದೇಶದಲ್ಲಿ ಒಂದು ಭಾಗವು ಯಾಜಕರಿಗೂ ಒಂದು ಭಾಗವು ಲೇವಿಯರಿಗೂ ಒಂದು ಭಾಗವು ದೇವಾಲಯಕ್ಕೂ ಸೇರಿವೆ. ಈ ವಿಶೇಷ ಪ್ರದೇಶದ ಕೇಂದ್ರದಲ್ಲಿ ದೇವಾಲಯವಿರುತ್ತದೆ. ಉಳಿದ ಭಾಗವೆಲ್ಲಾ ದೇಶಾಧಿಪತಿಗೆ ಸೇರಿದೆ. ಬೆನ್ಯಾಮೀನನ ಭಾಗಕ್ಕೂ ಯೆಹೂದದ ಭಾಗಕ್ಕೂ ನಡುವೆ ಇರುವ ಭೂಮಿಯು ಅಧಿಪತಿಗೆ ಸೇರಿದೆ.