Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:31 - ಪರಿಶುದ್ದ ಬೈಬಲ್‌

31 ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಬೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪಟ್ಟಣದ ಬಾಗಿಲುಗಳಿಗೆ ಇಸ್ರಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರದಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ್ಯ ಬಾಗಿಲು, ಮತ್ತೊಂದು ಲೇವಿ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಬಡಗಲಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿ ಬಾಗಿಲು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:31
9 ತಿಳಿವುಗಳ ಹೋಲಿಕೆ  

ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.


ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.


ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.


ಗೋಡೆಯ ಮೇಲಿರುವ ಕಲ್ಲುಗಳೆಲ್ಲಾ ಕೆಂಪು ಕಲ್ಲುಗಳೇ. ಹೊಳೆಯುವ ವಜ್ರಗಳಿಂದ ನಾನು ಹೊರಬಾಗಲನ್ನು ತಯಾರಿಸುವೆನು. ನಿನ್ನ ಸುತ್ತಲೂ ನಾನು ಅಮೂಲ್ಯವಾದ ಕಲ್ಲುಗಳಿಂದ ಗೋಡೆಯನ್ನು ಕಟ್ಟುವೆನು.


“ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


“ಇವು ನಗರದ ಬಾಗಿಲುಗಳು. ಅವುಗಳಿಗೆ ಇಸ್ರೇಲರ ಕುಲದವರ ಹೆಸರು ಕೊಡಲ್ಪಟ್ಟಿದೆ. “ನಗರದ ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು