ಯೆಹೆಜ್ಕೇಲನು 5:11 - ಪರಿಶುದ್ದ ಬೈಬಲ್11 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ. ಅಧ್ಯಾಯವನ್ನು ನೋಡಿ |
ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.