ಯೆಹೆಜ್ಕೇಲನು 5:14 - ಪರಿಶುದ್ದ ಬೈಬಲ್14 ದೇವರು ಹೇಳಿದ್ದೇನೆಂದರೆ, “ಜೆರುಸಲೇಮೇ, ನಾನು ನಿನ್ನನ್ನು ನಾಶಮಾಡುವೆನು. ನೀನು ಕಲ್ಲುಗಳ ರಾಶಿಯಾಗಿ ಹೋಗುವಿ. ನಿನ್ನ ಸುತ್ತಲೂ ಇರುವ ಜನಾಂಗಗಳು ನಿನ್ನನ್ನು ಗೇಲಿ ಮಾಡುತ್ತವೆ. ನಿನ್ನನ್ನು ದಾಟಿಹೋಗುವ ಪ್ರತಿಯೊಬ್ಬನೂ ನಿನ್ನನ್ನು ಕಂಡು ಹಾಸ್ಯಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳು ಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು. ಅಧ್ಯಾಯವನ್ನು ನೋಡಿ |
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನ್ನು ಇನ್ನು ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದುಹೋಗುವವು.
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.