Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:17 - ಪರಿಶುದ್ದ ಬೈಬಲ್‌

17 ನಾನು ನಿನಗೆ ವಿರುದ್ಧವಾಗಿ ಬರಗಾಲಗಳನ್ನು ಮತ್ತು ಕ್ರೂರಪ್ರಾಣಿಗಳನ್ನು ಕಳುಹಿಸುವೆನು. ಅವು ನಿನ್ನ ಮಕ್ಕಳನ್ನು ಕೊಲ್ಲುತ್ತವೆ. ನಿನ್ನನ್ನು ಕೊಲ್ಲುವುದಕ್ಕಾಗಿ ರೋಗಗಳನ್ನು, ಹಿಂಸೆಯನ್ನು ಮತ್ತು ಯುದ್ಧಗಳನ್ನು ಕಳುಹಿಸುವೆನು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ. ಮತ್ತು ಇದು ನೆರವೇರುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಕಳುಹಿಸುವ ಕ್ಷಾಮದಿಂದಲೂ, ದುಷ್ಟಮೃಗಗಳಿಂದಲೂ ನಿನಗೆ ಪುತ್ರಶೋಕವು ಉಂಟಾಗುವುದು; ವ್ಯಾಧಿಯೂ, ರಕ್ತ ಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು” ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಕಳುಹಿಸುವ ಕ್ಷಾಮದಿಂದ, ದುಷ್ಟಮೃಗಗಳಿಂದ ನಿನಗೆ ಪುತ್ರಶೋಕ ಪ್ರಾಪ್ತಿಯಾಗುವುದು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಜೀವನಾಧಾರವನ್ನು ಮುರಿದುಹಾಕುವೆನು; ನಾನು ಕಳುಹಿಸುವ ಕ್ಷಾಮವೂ ದುಷ್ಟಮೃಗಗಳೂ ನಿನಗೆ ಪುತ್ರಶೋಕವನ್ನುಂಟುಮಾಡುವವು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಯೆಹೋವನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:17
28 ತಿಳಿವುಗಳ ಹೋಲಿಕೆ  

ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


“‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.


ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.


ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.


ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.


ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”


ನಾನು ನಿನ್ನನ್ನು ಬರಿದಾದ ಬಂಡೆಯನ್ನಾಗಿ ಮಾಡುವೆನು. ಸಮುದ್ರದ ತೀರದಲ್ಲಿ ಬಲೆಗಳನ್ನು ಹರಡುವ ಸ್ಥಳವಾಗಿ ನೀನು ಮಾರ್ಪಡುವೆ. ನೀನು ತಿರುಗಿ ಕಟ್ಟಲ್ಪಡುವದಿಲ್ಲ. ಇದು ಒಡೆಯನಾದ ಯೆಹೋವನ ನುಡಿ.” ನನ್ನ ಒಡೆಯನಾದ ಯೆಹೋವನು ಇದನ್ನು ನನಗೆ ತಿಳಿಸಿದನು.


ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.


ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.


ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’”


ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.”


ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,


ದೂರದಲ್ಲಿರುವ ಜನರು ರೋಗಗಳಿಂದ ಸಾಯುವರು. ಹತ್ತಿರದಲ್ಲಿರುವವರು ಕತ್ತಿಯಿಂದ ಸಾಯುವರು. ತಪ್ಪಿಸಿಕೊಂಡವರೂ ಉಳಿಸಲ್ಪಟ್ಟವರೂ ಹಸಿವೆಯಿಂದ ಸಾಯುವರು. ಆಗಲೇ ನನ್ನ ಕೋಪವು ಶಮನವಾಗುವದು.


ನಿನ್ನ ಸುತ್ತಲೂ ಇರುವ ಜನಾಂಗಗಳು ನಿನಗೆ ಅವಮಾನ ಮಾಡಿ ಗೇಲಿ ಮಾಡುತ್ತವೆ. ನೀನು ಅವರಿಗೆ ಎಚ್ಚರಿಕೆಯಾಗಿಯೂ ಭಯೋತ್ಪಾದಕಕಾರಿಯಾಗಿಯೂ ಇರುವಿ. ನಾನು ನನ್ನ ಮಹಾಕೋಪದಿಂದ ನಿನ್ನನ್ನು ದಂಡಿಸಿದಾಗ ಇದು ಸಂಭವಿಸುವುದು. ಯೆಹೋವನಾದ ನಾನೇ ಇದನ್ನು ಹೇಳಿದ್ದೇನೆ.


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು.


ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.


ಬರಗಾಲವೆಂಬ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ಮತ್ತೆ ಯೆಹೋವನ ಸಂದೇಶವು ನನಗೆ ಬಂದಿತು.


ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು