Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:4 - ಪರಿಶುದ್ದ ಬೈಬಲ್‌

4 ಬಳಿಕ ಕೂದಲಲ್ಲಿ ಸ್ವಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶಮಾಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:4
7 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.


“ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.


ಆದರೆ ನೀನು ಅದರಿಂದ ಕೆಲವು ಕೂದಲನ್ನು ತೆಗೆದು ನಿನ್ನ ಮೇಲಂಗಿಯ ಅಂಚಿನಲ್ಲಿ ಸುತ್ತಿಡು. ನಾನು ನನ್ನ ಜನರಲ್ಲಿ ಕೆಲವರನ್ನು ರಕ್ಷಿಸುವೆನು ಎಂಬುದಕ್ಕೆ ಇದು ಗುರುತಾಗಿದೆ.


ಆಮೇಲೆ ನನ್ನ ಒಡೆಯನಾದ ಯೆಹೋವನು ಹೀಗೆಂದನು: “ಆ ಇಟ್ಟಿಗೆಯು ಜೆರುಸಲೇಮಿನ ಚಿತ್ರ. ನಾನು ಜೆರುಸಲೇಮನ್ನು ಇತರ ಜನಾಂಗಗಳ ಮಧ್ಯದಲ್ಲಿ ನೆಲೆಗೊಳಿಸಿದ್ದೇನೆ. ಆಕೆಯ ಸುತ್ತಲೂ ಬೇರೆ ದೇಶಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು