Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:6 - ಪರಿಶುದ್ದ ಬೈಬಲ್‌

6 ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡಿಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:6
24 ತಿಳಿವುಗಳ ಹೋಲಿಕೆ  

ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.


ದೇವರು ಹೇಳಿದ್ದೇನೆಂದರೆ: “ನೀನು ಮಾಡಿದ ದುಷ್ಕೃತ್ಯಗಳ ಅರ್ಧದಷ್ಟು ಸಮಾರ್ಯವು ಮಾಡಿತ್ತು. ಸಮಾರ್ಯದವರಿಗಿಂತಲೂ ಹೆಚ್ಚಾದ ಭಯಂಕರಕೃತ್ಯಗಳನ್ನು ನೀನು ಮಾಡಿರುವೆ. ನಿನ್ನ ಅಕ್ಕತಂಗಿಯರಿಗಿಂತ ಹೆಚ್ಚಾಗಿ ನೀನು ದುಷ್ಕೃತ್ಯಗಳನ್ನು ಮಾಡಿರುವೆ. ಸಮಾರ್ಯ ಮತ್ತು ಸೊದೋಮ್ ನಿನ್ನೊಂದಿಗೆ ಹೋಲಿಸಿ ನೋಡಿದರೆ ಅವು ಒಳ್ಳೆಯ ಪಟ್ಟಣಗಳಂತೆ ತೋರಿಬರುತ್ತವೆ.


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ಹುಲ್ಲುತಿನ್ನುವ ಹೋರಿಯ ಮೂರ್ತಿಗಾಗಿ ಅವರು ಮಹಿಮಾಸ್ವರೂಪನಾದ ದೇವರನ್ನೇ ಬಿಟ್ಟುಕೊಟ್ಟರು!


ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?


ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.


“ಯೆಹೂದದ ರಾಜನಾದ ಮನಸ್ಸೆಯು ತನಗಿಂತಲೂ ಮುಂಚೆ ಇದ್ದ ಅಮೋರಿಯರಿಗಿಂತ ಹೆಚ್ಚು ಅಸಹ್ಯವಾದ ಕೃತ್ಯಗಳನ್ನು ಮಾಡಿದನು. ಮನಸ್ಸೆಯು ತನ್ನ ವಿಗ್ರಹಗಳಿಂದ ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದನು.


ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.


ನಮ್ಮ ಪೂರ್ವಿಕರು ನಿನ್ನ ಸೇವೆಮಾಡಲಿಲ್ಲ. ತಮ್ಮ ಸ್ವಂತ ದೇಶದಲ್ಲಿ ವಾಸಿಸುವಾಗಲೂ ನಿನ್ನ ಸೇವೆಮಾಡಲಿಲ್ಲ; ಕೆಟ್ಟತನವನ್ನು ನಿಲ್ಲಿಸಲಿಲ್ಲ. ನೀನು ಕೊಟ್ಟ ಉತ್ತಮ ವಸ್ತುಗಳಲ್ಲಿಯೂ ಉತ್ತಮ ಭೂಮಿಯಲ್ಲಿಯೂ ಆನಂದಿಸಿದರು. ಅವರಿಗೆ ಬೇಕಾದಷ್ಟು ಜಮೀನಿತ್ತು. ಆದರೂ ಅವರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ.


ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”


“ಆದರೆ ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ತಪ್ಪುಗಳನ್ನು ಮಾಡಿದ್ದೇವೆ. ನಾವು ನಿನಗೆ ವಿರೋಧವಾಗಿ ದಂಗೆ ಎದ್ದಿದ್ದೇವೆ. ನಾವು ನಿನ್ನ ಆಜ್ಞೆಗಳನ್ನು ಮತ್ತು ಸರಿಯಾದ ನಿರ್ಣಯಗಳನ್ನು ತೊರೆದಿದ್ದೇವೆ.


“ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.


“ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನಕೃತ್ಯಗಳನ್ನು ಮಾಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು