ಯೆಹೆಜ್ಕೇಲನು 5:7 - ಪರಿಶುದ್ದ ಬೈಬಲ್7 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ: “ನೀವು ಸುತ್ತಲಿರುವ ಜನಾಂಗಗಳಿಗಿಂತ ಹೆಚ್ಚು ಕೆಡುಕನ್ನು ಮಾಡಿದ್ದೀರಿ. ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ; ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ನಿಮ್ಮ ಸುತ್ತಲಿರುವ ಜನಾಂಗಗಳ ನಿಯಮಗಳನ್ನೂ ಅನುಸರಿಸಲಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ಕೈಕೊಳ್ಳದೆ ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸದೆ ಆ ಜನಾಂಗಗಳಿಗಿಂತ ಹೆಚ್ಚು ದೊಂಬಿಮಾಡುವವರಾಗಿರುವದರಿಂದ [ಯೆರೂಸಲೇಮೇ,] ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ, ಅಧ್ಯಾಯವನ್ನು ನೋಡಿ |