ಯೆಹೆಜ್ಕೇಲನು 6:10 - ಪರಿಶುದ್ದ ಬೈಬಲ್10 ನಾನೇ ಯೆಹೋವನೆಂದು ಅವರಿಗೆ ತಿಳಿಯುವುದು. ಈ ಆಪತ್ತನ್ನು ಬರಮಾಡುವೆನು ಎಂದು ನಾನು ಹೇಳಿದ್ದಕ್ಕೆ ಸರಿಯಾದ ಕಾರಣವಿತ್ತೆಂದು ಅವರು ಗ್ರಹಿಸಿಕೊಳ್ಳುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನೇ ಯೆಹೋವ ದೇವರೆಂದೂ, ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ, ನಾನು ವ್ಯರ್ಥವಾಗಿ ಹೇಳುವುದಿಲ್ಲವೆಂದೂ ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.