Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 6:13 - ಪರಿಶುದ್ದ ಬೈಬಲ್‌

13 ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 6:13
18 ತಿಳಿವುಗಳ ಹೋಲಿಕೆ  

ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ಅವರು ಪರ್ವತ ಶಿಖರಗಳ ಮೇಲೆ ಯಜ್ಞಗಳನ್ನರ್ಪಿಸುತ್ತಾರೆ; ಬೆಟ್ಟಗಳ ಮೇಲೆಯೂ ಓಕ್, ಪಾಪಲಾರ್ ಮತ್ತು ಏಲ್ಮ್ ಮರಗಳಡಿಗಳಲ್ಲಿಯೂ ಧೂಪ ಹಾಕುತ್ತಾರೆ. ಆ ಮರಗಳ ನೆರಳು ದಟ್ಟವಾಗಿರುವದು. ಆದ್ದರಿಂದ ನಿಮ್ಮ ಹೆಣ್ಣುಮಕ್ಕಳು ವೇಶ್ಯೆಯರಂತೆ ಅದರಡಿಯಲ್ಲಿ ಮಲಗುವರು. ನಿಮ್ಮ ಸೊಸೆಯಂದಿರು ಲೈಂಗಿಕಪಾಪದಲ್ಲಿ ಮಗ್ನರಾಗಿರುವರು.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.


ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.


ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


ಆ ನೀತಿವಂತ ಮನುಷ್ಯನು ಬೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನ್ನ ಹೆಂಡತಿಯು ಮುಟ್ಟಾದಾಗ ಆಕೆಯನ್ನು ಕೂಡುವುದಿಲ್ಲ.


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.


ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು