ಯೆಹೆಜ್ಕೇಲನು 6:4 - ಪರಿಶುದ್ದ ಬೈಬಲ್4 ನಿಮ್ಮ ಯಜ್ಞವೇದಿಕೆಗಳು ನಾಶವಾಗುವವು. ನಿಮ್ಮ ಧೂಪವೇದಿಕೆಗಳು ಕೆಡವಲ್ಪಡುವವು. ನಿಮ್ಮ ಹೆಣಗಳನ್ನು ನಿಮ್ಮ ಹೊಲಸು ವಿಗ್ರಹಗಳ ಮುಂದೆ ಬಿಸಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು. ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”