ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.