ಯೆಹೆಜ್ಕೇಲನು 6:8 - ಪರಿಶುದ್ದ ಬೈಬಲ್8 ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”