ಯೆಹೆಜ್ಕೇಲನು 7:11 - ಪರಿಶುದ್ದ ಬೈಬಲ್11 ದುಷ್ಟತನವನ್ನು ದಂಡಿಸಲು ಹಿಂಸೆಯು ಬೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿ ಒಬ್ಬರೂ ಉಳಿಯುವುದಿಲ್ಲ. ಅವರ ಐಶ್ವರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಿಂಸೆಯು ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ [ಉಳಿಯರು], ಆ ಜನಸಮೂಹದಲ್ಲಿಯೂ ಅವರ ಆಸ್ತಿಯಲ್ಲಿಯೂ [ಶೇಷವೇನೂ ಇರದು]. ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.