Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:14 - ಪರಿಶುದ್ದ ಬೈಬಲ್‌

14 “ಅವರು ಜನರನ್ನು ಎಚ್ಚರಿಸುವುದಕ್ಕಾಗಿ ತುತ್ತೂರಿಯನ್ನು ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:14
11 ತಿಳಿವುಗಳ ಹೋಲಿಕೆ  

“ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.


“ಎಲ್ಲಾ ದೇಶಗಳಲ್ಲಿ ಯುದ್ಧದ ಧ್ವಜವನ್ನು ಹಾರಿಸಿರಿ. ಎಲ್ಲಾ ರಾಷ್ಟ್ರಗಳಲ್ಲಿ ತುತ್ತೂರಿಗಳನ್ನು ಊದಿರಿ. ಬಾಬಿಲೋನಿನ ವಿರುದ್ಧ ಹೋರಾಡಲು ಎಲ್ಲಾ ಜನಾಂಗಗಳನ್ನು ಸಿದ್ಧಗೊಳಿಸಿರಿ. ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಜ್ಯಗಳನ್ನು ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಕರೆಯಿರಿ. ಸೈನ್ಯದ ಮುಂದಾಳಾಗಿರಲು ಒಬ್ಬ ಸೇನಾಧಿಪತಿಯನ್ನು ಆರಿಸಿರಿ. ಮಿಡತೆಯ ದಂಡಿನಂತೆ ಅಪಾರವಾಗಿರುವ ಅಶ್ವಬಲವನ್ನು ಕಳುಹಿಸಿರಿ.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು