Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:19 - ಪರಿಶುದ್ದ ಬೈಬಲ್‌

19 ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:19
21 ತಿಳಿವುಗಳ ಹೋಲಿಕೆ  

ಅವರ ಬೆಳ್ಳಿಬಂಗಾರಗಳು ಅವರ ಸಹಾಯಕ್ಕೆ ಬಾರವು. ಆ ಸಮಯದಲ್ಲಿ ಯೆಹೋವನು ಕೋಪಾಗ್ನಿಯಿಂದ ತುಂಬಿದವನಾಗುವನು. ಯೆಹೋವನು ಇಡೀ ಪ್ರಪಂಚವನ್ನೇ ನಾಶಮಾಡುವನು. ಭೂಮಿಯ ಮೇಲಿರುವ ಪ್ರತಿಯೊಬ್ಬನನ್ನು ಯೆಹೋವನು ಸಂಪೂರ್ಣವಾಗಿ ನಾಶಮಾಡುವನು.”


ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.


ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


ದಾವೀದನು ಹೀಗೆನ್ನುತ್ತಾನೆ: “ಅವರು ತಮ್ಮ ಔತಣಗಳಲ್ಲಿ ಸಿಕ್ಕಿಕೊಂಡು ಬಂಧಿತರಾಗಲಿ; ಎಡವಿಬಿದ್ದು ದಂಡನೆ ಹೊಂದಲಿ.


ಅವರು ಅರಾಮ್ಯರ ಸೇನೆಗಾಗಿ ಹುಡುಕಿಕೊಂಡು ಜೋರ್ಡನ್ ನದಿಯವರೆಗೂ ಹೋದರು. ರಸ್ತೆಯ ದಾರಿಯಲ್ಲೆಲ್ಲಾ ಬಟ್ಟೆಗಳು ಮತ್ತು ಆಯುಧಗಳು ಬಿದ್ದಿದ್ದವು. ಅರಾಮ್ಯರು ಆತುರಾತುರವಾಗಿ ಹೋಗುವಾಗ ಅವುಗಳನ್ನೆಲ್ಲಾ ಬಿಸಾಡಿ ಹೋಗಿದ್ದರು. ಸಂದೇಶಕರು ಸಮಾರ್ಯಕ್ಕೆ ಹಿಂದಿರುಗಿ ಬಂದು ರಾಜನಿಗೆ ವಿಷಯವನ್ನು ಹೇಳಿದರು.


ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.


ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.


ಲೋಕದೊಳಗಿರುವ ಎಲ್ಲಾ ಮನುಷ್ಯರನ್ನೂ ಪ್ರಾಣಿಗಳನ್ನೂ ಆಕಾಶದಲ್ಲಿರುವ ಎಲ್ಲಾ ಪಕ್ಷಿಗಳನ್ನೂ ನೀರಿನಲ್ಲಿರುವ ಎಲ್ಲಾ ಮೀನುಗಳನ್ನೂ ನಾನು ನಾಶಮಾಡುವೆನು. ಎಲ್ಲಾ ದುಷ್ಟ ಜನರನ್ನೂ ಮತ್ತು ಅವರನ್ನು ಪಾಪಕ್ಕೆ ನಡಿಸುವ ಎಲ್ಲಾ ವಸ್ತುಗಳನ್ನೂ ನಾನು ನಾಶಮಾಡುವೆನು. ಭೂಮಿಯ ಮೇಲಿರುವ ಎಲ್ಲಾ ಜನರನ್ನು ನಿರ್ಮೂಲ ಮಾಡುವೆನು.” ಈ ವಿಷಯಗಳನ್ನು ಯೆಹೋವನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು