ಯೆಹೆಜ್ಕೇಲನು 7:2 - ಪರಿಶುದ್ದ ಬೈಬಲ್2 ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನನ್ನ ಒಡೆಯನಾದ ಯೆಹೋವನ ಸಂದೇಶವಿದು. ಈ ಸಂದೇಶವನ್ನು ಇಸ್ರೇಲ್ ದೇಶಕ್ಕೆ ನೀಡು. “ಅಂತ್ಯ, ಅಂತ್ಯವು ಬರುವುದು. ಇಡೀ ದೇಶವು ಹಾಳಾಗಿಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ, ‘ಪ್ರಳಯವು, ಪೂರ್ಣ ಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ - ಪ್ರಳಯವು, ಪೂರ್ಣಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ! ಅಧ್ಯಾಯವನ್ನು ನೋಡಿ |
ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.