20 “ಆ ಜನರು ತಮ್ಮ ಬೆಳ್ಳಿಬಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಬಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.
20 ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
20 ಅವರ ಆಭರಣಗಳ ಚಂದವು ಅವರಿಗೆ ಗರ್ವಾಸ್ಪದವಾಯಿತು; ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
20 ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.
ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.
‘ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.
ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.
ಕೋಪೋದ್ರಿಕ್ತನಾದ ಯೆಹೋವನು ಚೀಯೋನಿನ ಮಗಳ ಮೇಲೆ ಹೇಗೆ ಕಾರ್ಮೋಡಗಳು ಕವಿಯುವಂತೆ ಮಾಡಿದ್ದಾನೆ ನೋಡಿರಿ. ಆತನು ಇಸ್ರೇಲಿನ ವೈಭವವನ್ನು ಆಕಾಶದಿಂದ ಭೂಮಿಗೆ ಎಸೆದಿದ್ದಾನೆ. ಯೆಹೋವನಿಗೆ ಕೋಪ ಬಂದಾಗ ಆತನು ಇಸ್ರೇಲ್ ತನ್ನ ಪಾದಪೀಠವೆಂಬುದನ್ನು ಗಮನಕ್ಕೆ ತಂದುಕೊಳ್ಳಲಿಲ್ಲ.
ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.
ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು.
ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ.
ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)
ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.
ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.
ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.
ನೀನು ನಿನ್ನ ಬಟ್ಟೆಗಳಲ್ಲಿ ಕೆಲವನ್ನು ತೆಗೆದುಕೊಂಡು ನಿನ್ನ ಪೂಜಿಸುವ ಸ್ಥಳಗಳನ್ನು ವರ್ಣರಂಜಿತವನ್ನಾಗಿ ಮಾಡಿದೆ ಮತ್ತು ಆ ಸ್ಥಳಗಳಲ್ಲಿ ನೀನು ಸೂಳೆಯಂತೆ ವರ್ತಿಸಿದೆ. ಹಾದುಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ನಿನ್ನನ್ನು ಒಪ್ಪಿಸಿಕೊಟ್ಟೆ.
ನಾನು ನಿನಗೆ ರೊಟ್ಟಿ, ಜೇನು ಮತ್ತು ಎಣ್ಣೆಯನ್ನು ಕೊಟ್ಟಿದ್ದೆನು. ಆದರೆ ನೀನು ಆ ಆಹಾರವನ್ನು ಮೂರ್ತಿಗಳಿಗೆ ಕೊಟ್ಟೆ. ಆ ಸುಳ್ಳು ದೇವರುಗಳನ್ನು ಮೆಚ್ಚಿಸುವದಕ್ಕೋಸ್ಕರ ನೀನು ಅವುಗಳನ್ನು ಸುಗಂಧವಾಸನೆಯ ಕಾಣಿಕೆಯಂತೆ ಅರ್ಪಿಸಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.