ಯೆಹೆಜ್ಕೇಲನು 7:22 - ಪರಿಶುದ್ದ ಬೈಬಲ್22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು. ಆ ಪರದೇಶಿಯರು ನನ್ನ ಅಮೂಲ್ಯವಾದ ಆಲಯವನ್ನು ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ಅವರ ಕಡೆಯಿಂದ ನನ್ನ ಮುಖವನ್ನು ಓರೆಮಾಡಲು ನನ್ನ ಇಷ್ಟಮಂದಿರವನ್ನು ಹೊಲೆಗೆಡಿಸುವರು; ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.