ಯೆಹೆಜ್ಕೇಲನು 7:23 - ಪರಿಶುದ್ದ ಬೈಬಲ್23 “ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಂದು ಸರಪಣಿಯನ್ನು ಮಾಡು; ಏಕಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಬಲಾತ್ಕಾರಪೂರ್ಣವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ. ಅಧ್ಯಾಯವನ್ನು ನೋಡಿ |
ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.