Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:25 - ಪರಿಶುದ್ದ ಬೈಬಲ್‌

25 “ಜನರು ಭಯದಿಂದ ನಡುಗುವರು. ಅವರು ಶಾಂತಿಗಾಗಿ ಹುಡುಕುವರು, ಆದರೆ ಅವರಿಗೆ ಅದು ಸಿಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಂಕಟ ಸಂಭವಿಸುವುದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸಂಕಟ ಸಂಭವಿಸುವದು; ಅವರು ಸಮಾಧಾನವನ್ನು ಹುಡುಕಿದರೂ ಸ್ವಲ್ಪವೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:25
7 ತಿಳಿವುಗಳ ಹೋಲಿಕೆ  

ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.


“ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


ನನ್ನ ದೇವರು ಹೇಳುವುದೇನೆಂದರೆ: “ದುಷ್ಟ ಜನರಿಗೆ ಸಮಾಧಾನವಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು