ಯೆಹೆಜ್ಕೇಲನು 7:3 - ಪರಿಶುದ್ದ ಬೈಬಲ್3 ನಿನ್ನ ಅಂತ್ಯವು ಈಗ ಬರುವುದು. ನಿನ್ನ ಮೇಲೆ ನನಗೆ ಎಷ್ಟು ಕೋಪವಿದೆ ಎಂದು ನಾನು ತೋರಿಸುವೆನು. ನಿನ್ನ ದುಷ್ಕೃತ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು. ನಿನ್ನ ಅಸಹ್ಯಕೃತ್ಯಗಳಿಗಾಗಿ ನಾನು ಪ್ರತೀಕಾರ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈಗಲೇ ನಿನಗೆ ಅಂತ್ಯವು ಬಂದಿದೆ; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ತಿನ್ನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.