ಯೆಹೆಜ್ಕೇಲನು 7:4 - ಪರಿಶುದ್ದ ಬೈಬಲ್4 ನಿನಗೆ ನಾನು ಇನ್ನು ಕರುಣೆಯನ್ನು ತೋರಿಸೆನು. ನಿನ್ನ ವಿಷಯದಲ್ಲಿ ನಾನು ದುಃಖಿಸುವದಿಲ್ಲ. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನಿನ್ನನ್ನು ಶಿಕ್ಷಿಸುವೆನು. ನೀನು ಅಂಥಾ ಭಯಂಕರ ಕೃತ್ಯಗಳನ್ನು ಮಾಡಿದ್ದೀ. ಈಗ ನಾನೇ ಯೆಹೋವನೆಂದು ನೀನು ತಿಳಿಯುವಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’ ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”