ಯೆಹೆಜ್ಕೇಲನು 7:8 - ಪರಿಶುದ್ದ ಬೈಬಲ್8 ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿ |
“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.