Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:9 - ಪರಿಶುದ್ದ ಬೈಬಲ್‌

9 ನಾನು ನಿಮಗೆ ಕರುಣೆ ತೋರಿಸೆನು. ನಿಮಗಾಗಿ ನಾನು ದುಃಖಿಸುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ಅಂಥಾ ಭಯಂಕರವಾದ ಕೃತ್ಯಗಳನ್ನು ನೀವು ಮಾಡಿದ್ದೀರಿ. ನಿಮ್ಮನ್ನು ದಂಡಿಸಿದಾತನು ಯೆಹೋವನಾದ ನಾನೇ ಎಂಬುದು ಆಗ ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:9
13 ತಿಳಿವುಗಳ ಹೋಲಿಕೆ  

ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.


ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.


ಯೆಹೋವನ ಸ್ವರವು ಪಟ್ಟಣದಲ್ಲಿ ಗಟ್ಟಿಯಾಗಿ ಕೇಳಿಸುತ್ತದೆ. “ಬುದ್ಧಿವಂತನು ಯೆಹೋವನ ನಾಮವನ್ನು ಗೌರವಿಸುವನು. ಆದ್ದರಿಂದ ಶಿಕ್ಷೆಯ ಬೆತ್ತದ ಕಡೆಗೆ ಲಕ್ಷ್ಯವಿಡು. ಆ ಬೆತ್ತವನ್ನು ಹಿಡುಕೊಂಡವನನ್ನೂ ಗೌರವಿಸು.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ಇನ್ನು ಸ್ವಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನ್ನ ಕೋಪವನ್ನೆಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಅಸಹ್ಯಕೃತ್ಯಗಳಿಗಾಗಿ ನಾನು ಸೇಡನ್ನು ತೀರಿಸಿಕೊಳ್ಳುವೆನು.


“ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.


ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


ಬೆಳ್ಳಿಯು ಕುಲುಮೆಯಲ್ಲಿ ಕರಗಿಹೋಗುವಂತೆಯೇ ನೀವು ಪಟ್ಟಣದಲ್ಲಿ ಕರಗಿಹೋಗುವಿರಿ. ಯೆಹೋವನಾದ ನಾನೇ ನನ್ನ ಕೋಪವನ್ನು ನಿಮ್ಮ ಮೇಲೆ ಸುರಿದೆನೆಂದು ಆಗ ನೀವು ಅರ್ಥಮಾಡಿಕೊಳ್ಳುವಿರಿ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು