Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:11 - ಪರಿಶುದ್ದ ಬೈಬಲ್‌

11 ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:11
31 ತಿಳಿವುಗಳ ಹೋಲಿಕೆ  

ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನತನ್ನ ಧೂಪಾರತಿಯನ್ನು ಅಂದರೆ ಒಟ್ಟಾಗಿ ಇನ್ನೂರೈವತ್ತು ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನೂ ಆರೋನನೂ ನಿಮ್ಮನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು


ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


“ಯೆಹೋವನೇ, ನಾವೆಲ್ಲರೂ ನಾಚಿಕೆಪಡಬೇಕು. ನಮ್ಮ ಎಲ್ಲ ರಾಜರು, ನಾಯಕರು ನಾಚಿಕೆಪಟ್ಟುಕೊಳ್ಳಬೇಕು. ನಮ್ಮ ಹಿರಿಯರು ನಾಚಿಕೆಪಡಬೇಕು. ಏಕೆಂದರೆ ನಾವು ನಿನ್ನ ವಿಷಯದಲ್ಲಿ ಪಾಪ ಮಾಡಿದ್ದೇವೆ.


ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.


ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,


ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು.


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.


ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.


ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು.


ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.


ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.


ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.


“ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.


ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.


ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ಆದರೆ ರಾಜನಾದ ಯೆಹೋಯಾಕೀಮನು ಎಲ್ನಾತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲ್ನಾತಾನನು ಅಕ್ಬೋರನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು