Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:12 - ಪರಿಶುದ್ದ ಬೈಬಲ್‌

12 ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:12
21 ತಿಳಿವುಗಳ ಹೋಲಿಕೆ  

ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ದೇವರು ನನಗೆ, “ನರಪುತ್ರನೇ, ಈ ದುರಾಚಾರಗಳನ್ನು ನೋಡಿದ್ದೀಯಾ? ನನ್ನೊಂದಿಗೆ ಬಾ, ಇವುಗಳಿಗಿಂತ ಇನ್ನೂ ಹೆಚ್ಚಿನ ಭಯಂಕರ ಸಂಗತಿಗಳನ್ನು ನಿನಗೆ ತೋರಿಸುವೆನು” ಎಂದನು.


ಆ ಜನರು ಕತ್ತಲೆಯಲ್ಲಿ ಮಾಡುವ ಗುಪ್ತಕಾರ್ಯಗಳ ಬಗ್ಗೆ ಮಾತಾಡುವುದಕ್ಕೂ ನಾಚಿಕೆಯಾಗುತ್ತದೆ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಮಾರ್ಗದರ್ಶನಕ್ಕಾಗಿ ಯೆಹೋವನನ್ನು ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನ್ನ ಎದುರಿನಲ್ಲಿ ಕುಳಿತುಕೊಂಡರು.


ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.


ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕೃತ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನ್ನನ್ನು ಇನ್ನೂ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಬೆಗಳನ್ನು ಸೋಕಿಸುತ್ತಾರೆ.


ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.


ಬಳಿಕ ದೇವರು ನನಗೆ, “ನೀನು ನನ್ನೊಂದಿಗೆ ಬಂದರೆ, ಜನರು ಮಾಡುವ ಇನ್ನೂ ಭಯಂಕರ ಸಂಗತಿಗಳನ್ನು ನೀನು ನೋಡುವೆ” ಎಂದು ಹೇಳಿದನು.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು