Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:13 - ಪರಿಶುದ್ದ ಬೈಬಲ್‌

13 ಬಳಿಕ ದೇವರು ನನಗೆ, “ನೀನು ನನ್ನೊಂದಿಗೆ ಬಂದರೆ, ಜನರು ಮಾಡುವ ಇನ್ನೂ ಭಯಂಕರ ಸಂಗತಿಗಳನ್ನು ನೀನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ದೇವರು ನನಗೆ, “ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಆತನು ನನಗೆ - ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವರು, “ಮತ್ತೊಂದು ಸಾರಿ ತಿರುಗಿಕೋ. ಅವರು ಮಾಡುವ ಇನ್ನೂ ಮಹಾ ಅಸಹ್ಯ ಕಾರ್ಯಗಳನ್ನು ನೋಡುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:13
6 ತಿಳಿವುಗಳ ಹೋಲಿಕೆ  

ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ದೇವರು ನನಗೆ, “ನರಪುತ್ರನೇ, ಈ ದುರಾಚಾರಗಳನ್ನು ನೋಡಿದ್ದೀಯಾ? ನನ್ನೊಂದಿಗೆ ಬಾ, ಇವುಗಳಿಗಿಂತ ಇನ್ನೂ ಹೆಚ್ಚಿನ ಭಯಂಕರ ಸಂಗತಿಗಳನ್ನು ನಿನಗೆ ತೋರಿಸುವೆನು” ಎಂದನು.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಉಪಯೋಗಿಸುತ್ತಿದ್ದಾರೆ. ಅವರ ಬಾಯಿಂದ ಬಾಣಗಳಂತೆ ಸುಳ್ಳುಗಳು ಬರುತ್ತಿವೆ. ಈ ನಾಡಿನಲ್ಲಿ ಸತ್ಯವಲ್ಲ, ‘ಅಸತ್ಯ’ ಪ್ರಬಲವಾಗುತ್ತಿದೆ. ಅವರು ಒಂದು ಪಾಪದಿಂದ ಮತ್ತೊಂದು ಪಾಪಕ್ಕೆ ಹೋಗುತ್ತಿದ್ದಾರೆ. ಅವರು ನನ್ನನ್ನು ಅರಿತಿಲ್ಲ.” ಯೆಹೋವನು ಈ ಮಾತನ್ನು ಹೇಳಿದನು.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು