ಯೆಹೆಜ್ಕೇಲನು 8:14 - ಪರಿಶುದ್ದ ಬೈಬಲ್14 ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್” ದೇವತೆಗಾಗಿ ಅಳುತ್ತಾ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನನ್ನನ್ನು ಯೆಹೋವನ ಆಲಯದ ಬಡಗಣ ಬಾಗಿಲ ಮುಂದಕ್ಕೆ ಕರತಂದನು; ಇಗೋ, ಅಲ್ಲಿ ಸ್ತ್ರೀಯರು ತಮ್ಮೂಜ್ ದೇವತೆಗೋಸ್ಕರ ಅಳುತ್ತಾ ಕೂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು. ಅಧ್ಯಾಯವನ್ನು ನೋಡಿ |