ಯೆಹೆಜ್ಕೇಲನು 8:16 - ಪರಿಶುದ್ದ ಬೈಬಲ್16 ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು . ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |
ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ಯೆಹೂದದ ರಾಜರುಗಳು ಯಾಜಕರಾಗಿ ಸೇವೆಮಾಡಲು ಕೆಲವು ಸಾಮಾನ್ಯ ಜನರನ್ನು ಆರಿಸಿಕೊಂಡರು. ಈ ಜನರು ಆರೋನನ ಕುಲದಿಂದ ಬಂದವರಲ್ಲ! ಈ ಸುಳ್ಳುಯಾಜಕರು ಯೆಹೂದದ ನಗರಗಳಲ್ಲಿನ ಮತ್ತು ಜೆರುಸಲೇಮಿನ ಊರುಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು. ಅವರು ಬಾಳನನ್ನು, ಸೂರ್ಯನನ್ನು, ಚಂದ್ರನನ್ನು, ಆಕಾಶ ಸೈನ್ಯವಾದ ನಕ್ಷತ್ರಗಳನ್ನು ಗೌರವಿಸಲು ಧೂಪವನ್ನು ಸುಡುತ್ತಿದ್ದರು. ಆದರೆ ಯೋಷೀಯನು ಆ ಸುಳ್ಳು ಯಾಜಕರನ್ನು ನಿಲ್ಲಿಸಿದನು.
ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.