Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:18 - ಪರಿಶುದ್ದ ಬೈಬಲ್‌

18 ಅವರಿಗೆ ನಾನು ನನ್ನ ರೌದ್ರವನ್ನು ತೋರಿಸುವೆನು. ಅವರಿಗೆ ನಾನು ಕರುಣೆಯನ್ನು ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನ್ನನ್ನು ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:18
25 ತಿಳಿವುಗಳ ಹೋಲಿಕೆ  

ನೀವು ಯೆಹೋವನಿಗೆ ಪ್ರಾರ್ಥಿಸಬಹುದು. ಆದರೆ ಆತನು ನಿಮಗೆ ಉತ್ತರಕೊಡುವದಿಲ್ಲ. ನಿಮ್ಮ ಕೆಟ್ಟ ಪಾಪಗಳ ನಿಮಿತ್ತ ತನ್ನ ಮುಖವನ್ನು ಮರೆಮಾಡಿಕೊಳ್ಳುತ್ತಾನೆ.”


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.


ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.


ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.


ಇಗೋ, ನಿಮ್ಮನ್ನು ರಕ್ಷಿಸಲು ಯೆಹೋವನು ಶಕ್ತನಾಗಿದ್ದಾನೆ. ನೀವು ಸಹಾಯಕ್ಕಾಗಿ ಪ್ರಾರ್ಥಿಸುವಾಗ ಆತನು ನಿಮ್ಮನ್ನು ಆಲೈಸುವನು.


ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.


ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.


ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು.


ಜೆರುಸಲೇಮಿನ ಶತ್ರುಗಳು ಗೆದ್ದಿದ್ದಾರೆ. ಅವಳ ಶತ್ರುಗಳು ಜಯಶೀಲರಾಗಿದ್ದಾರೆ. ಯೆಹೋವನು ಅವಳನ್ನು ದಂಡಿಸಿದ ಕಾರಣ ಹೀಗಾಯಿತು. ಅವಳ ಅನೇಕ ಪಾಪಗಳಿಗಾಗಿ ಆತನು ಜೆರುಸಲೇಮನ್ನು ದಂಡಿಸಿದನು. ಅವಳ ಮಕ್ಕಳು ದೂರಹೋಗಿದ್ದಾರೆ. ಅವರು ವೈರಿಗಳ ಸೆರೆಯಾಳುಗಳಾಗಿ ದೂರ ಹೋಗಿದ್ದಾರೆ.


ಯೆಹೋವನು ತಾನು ನಿಯೋಜಿಸಿದಂತೆ ಮಾಡಿದನು. ತಾನು ಮಾಡುತ್ತೇನೆಂದು ಹೇಳಿದ್ದನ್ನು ಆತನು ಮಾಡಿದ್ದಾನೆ. ಪುರಾತನ ಕಾಲದಿಂದ ತಾನು ವಿಧಿಸಿದ್ದನ್ನು ಆತನು ಮಾಡಿದ್ದಾನೆ. ಆತನು ನಿಷ್ಕರುಣೆಯಿಂದ ನಾಶಮಾಡಿದ್ದಾನೆ. ನಿನಗೆ ಸಂಭವಿಸಿದವುಗಳ ಮೂಲಕವಾಗಿ ಆತನು ನಿನ್ನ ವೈರಿಗಳನ್ನು ಸಂತೋಷಪಡಿಸಿದ್ದಾನೆ. ಆತನು ನಿನ್ನ ವೈರಿಗಳ ಸಾಮರ್ಥ್ಯವನ್ನು ಹೆಚ್ಚಿಸಿದ್ದಾನೆ.


ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು.


ನಿಮ್ಮ ಪೂರ್ವಿಕರ ಮೇಲೆ ಯೆಹೋವನು ಬಹಳವಾಗಿ ಕೋಪಗೊಂಡಿದ್ದಾನೆ.


ರಾಜನು ಬೇಕೆಂದು ಕೇಳಿಕೊಂಡದ್ದಕ್ಕಾಗಿ ಗೋಳಾಡುವಿರಿ. ಆದರೆ ಆಗ ಯೆಹೋವನು ನಿಮಗೆ ಉತ್ತರಿಸುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು