ಯೆಹೆಜ್ಕೇಲನು 8:3 - ಪರಿಶುದ್ದ ಬೈಬಲ್3 ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.
ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.