ಯೆಹೆಜ್ಕೇಲನು 8:5 - ಪರಿಶುದ್ದ ಬೈಬಲ್5 ದೇವರು ನನ್ನೊಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನ್ನು ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದ್ವಾರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಆತನು ನನಗೆ - ನರಪುತ್ರನೇ, ಬಡಗಲಿಗೆ ಕಣ್ಣೆತ್ತಿ ನೋಡು ಎಂದು ಹೇಳಿದನು; ಹಾಗೆ ನಾನು ಬಡಗಲಿಗೆ ಕಣ್ಣೆತ್ತಿ ನೋಡಲು ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವೇ ಯಜ್ಞವೇದಿಯ ಬಾಗಿಲ ಬಡಗಲಲ್ಲಿ ಬಾಗಿಲ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು. ಅಧ್ಯಾಯವನ್ನು ನೋಡಿ |