Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:6 - ಪರಿಶುದ್ದ ಬೈಬಲ್‌

6 ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:6
32 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


ಕೆರೂಬಿದೂತರು ರೆಕ್ಕೆಗಳನ್ನು ಚಾಚಿ ಹಾರಿದವು. ಅವು ಆಲಯವನ್ನು ಬಿಟ್ಟುಹೋಗುವದನ್ನು ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಬಾಗಿಲ ಬಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.


ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಕೃತ್ಯಗಳನ್ನು ಹೋಗಿ ನೋಡು” ಎಂದು ಹೇಳಿದನು.


ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನ್ನು ಚಾಚಿ ಆಕಾಶದಲ್ಲಿ ಹಾರಿಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು.


ಆಗ ದೇವರು ನನ್ನನ್ನು ಯೆಹೋವನಾಲಯದ ಉತ್ತರ ದ್ವಾರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಧಿಸುವುದನ್ನು ನೋಡಿದೆನು. ಅವರು ತಮ್ಮೂಜ್ ಎಂಬ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.


ಆ ಜನರು ತಮಗಾಗಿ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ಆ ವಿಗ್ರಹಗಳನ್ನಿಟ್ಟು ನನ್ನ ಆಲಯವನ್ನು ‘ಹೊಲಸು’ ಮಾಡಿದ್ದಾರೆ.


ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


“ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ.


ನೀನು ಹಾಗೆ ಮಾಡಲೇಬೇಕು ಯಾಕೆಂದರೆ, ಯೆಹೂದದ ಜನರು ಮಾಡುವ ದುಷ್ಕೃತ್ಯಗಳನ್ನು ನಾನು ನೋಡಿದ್ದೇನೆ.” ಯೆಹೋವನು ಹೀಗೆನ್ನುತ್ತಾನೆ: “ಅವರು ತಮ್ಮ ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ನನ್ನ ಹೆಸರಿನಿಂದ ಖ್ಯಾತಿಪಡೆದ ಆಲಯದಲ್ಲಿ ಅವರು ವಿಗ್ರಹಗಳನ್ನು ಸ್ಥಾಪಿಸಿದ್ದಾರೆ. ಅವರು ನನ್ನ ಆಲಯವನ್ನು ‘ಮಲಿನ’ಗೊಳಿಸಿದ್ದಾರೆ.


ಆ ಜನರು ಯೆಹೂದದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಏನು ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತು.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ.


ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.


ಅನಾತೋತಿನ ಜನರು ನನ್ನ ವಿರುದ್ಧ ಮಾಡುತ್ತಿರುವ ಕುತಂತ್ರವನ್ನೂ ಮಾಡುವ ಕೃತ್ಯಗಳನ್ನೂ ಯೆಹೋವನು ನನಗೆ ತೋರಿಸಿದನು. ಆದ್ದರಿಂದ ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡೆನು.


ಬಳಿಕ ಆತನು ನನ್ನನ್ನು ಅಂಗಳದ ದ್ವಾರಕ್ಕೆ ತಂದನು. ನಾನು ಗೋಡೆಯಲ್ಲಿದ್ದ ಒಂದು ರಂಧ್ರವನ್ನು ಕಂಡೆನು.


“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಆಗ ಅವನು ನನಗೆ, “ನರಪುತ್ರನೇ, ನೀನು ನೋಡಿರುವ ವಿಷಯಗಳ ಬಗ್ಗೆ ಗಮನವಿಟ್ಟಿಯಾ?” ಎಂದು ಕೇಳಿದನು. ಆಗ ಅವನು ನನ್ನನ್ನು ಹೊಳೆಯ ಪಕ್ಕದಲ್ಲೇ ಕರೆದುಕೊಂಡು ಹೋದನು.


“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.


ಬಳಿಕ ದೇವರು ನನಗೆ, “ನೀನು ನನ್ನೊಂದಿಗೆ ಬಂದರೆ, ಜನರು ಮಾಡುವ ಇನ್ನೂ ಭಯಂಕರ ಸಂಗತಿಗಳನ್ನು ನೀನು ನೋಡುವೆ” ಎಂದು ಹೇಳಿದನು.


ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.


ಯೆಹೋವನ ಮಹಿಮೆಯು ಆಕಾಶಕ್ಕೆ ಎತ್ತಲ್ಪಟ್ಟು ಜೆರುಸಲೇಮಿಗೆ ಪೂರ್ವದಲ್ಲಿರುವ ಬೆಟ್ಟದ ಮೇಲೆ ನಿಂತಿತು.


ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು