Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:1 - ಪರಿಶುದ್ದ ಬೈಬಲ್‌

1 ಆಮೇಲೆ ದೇವರು ಗಟ್ಟಿಯಾದ ಧ್ವನಿಯಿಂದ ಕರೆಯುವುದು ನನಗೆ ಕೇಳಿಸಿತು: “ಪಟ್ಟಣವನ್ನು ದಂಡಿಸಲು ನೇಮಕಗೊಂಡಿರುವವರೇ, ಇಲ್ಲಿಗೆ ಬನ್ನಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಾಶದ ಆಯುಧವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಬನ್ನಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಆತನು - ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:1
11 ತಿಳಿವುಗಳ ಹೋಲಿಕೆ  

ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.


ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.


ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.


ಬಾಳನ ಆರಾಧಕರು ಯಜ್ಞಗಳನ್ನು ಮತ್ತು ಸರ್ವಾಂಗಹೋಮಗಳನ್ನು ಅರ್ಪಿಸಲು ಬಾಳನ ಆಲಯದೊಳಕ್ಕೆ ಹೋದರು. ಆದರೆ ಹೊರಗಡೆ ಯೇಹುವಿನ ಎಂಭತ್ತು ಜನರು ಕಾಯುತ್ತಿದ್ದರು. ಯೇಹು ಅವರಿಗೆ, “ಯಾರೂ ತಪ್ಪಿಸಿಕೊಂಡು ಹೋಗಲು ಬಿಡಬೇಡಿ. ಯಾರಾದರೂ ಒಬ್ಬ ಮನುಷ್ಯನನ್ನು ತಪ್ಪಿಸಿಕೊಂಡು ಹೋಗಲು ಬಿಟ್ಟರೆ, ಅವನು ತನ್ನ ಜೀವವನ್ನು ಬೆಲೆಯಾಗಿ ಕೊಡಬೇಕಾಗುತ್ತದೆ” ಎಂದು ಹೇಳಿದನು.


ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು