ಯೆಹೆಜ್ಕೇಲನು 9:10 - ಪರಿಶುದ್ದ ಬೈಬಲ್10 ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.