ಯೆಹೆಜ್ಕೇಲನು 9:2 - ಪರಿಶುದ್ದ ಬೈಬಲ್2 ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದ್ವಾರದ ಮಾರ್ಗದಿಂದ ಬರುತ್ತಿರುವುದನ್ನು ನಾನು ನೋಡಿದೆನು. ಪ್ರತಿಯೊಬ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಬ್ಬನು ನಾರುಮಡಿಯನ್ನು ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಬಳಿ ಹೋಗಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.