ಯೆಹೆಜ್ಕೇಲನು 9:4 - ಪರಿಶುದ್ದ ಬೈಬಲ್4 ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.